Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಪುಂಡು, ಪೋಕರಿಗಳಂತೆ ಮಾತನಾಡುತ್ತಿದ್ದಾರೆ: ಶೆಟ್ಟರ್‌

siddaramaiah jagasish shettar hubali ಸಿದ್ದರಾಮಯ್ಯ ಜಗದೀಶ್‌ ಶೆಟ್ಟರ್‌ ಹುಬ್ಬಳ್ಳಿ
bengaluru , ಮಂಗಳವಾರ, 7 ಜೂನ್ 2022 (15:00 IST)
ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡೋದು ಬಿಟ್ಟು ಪುಂಡ, ಪೋಕರಿಗಳ, ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿರುವ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ. ದೇಶ ಉಳಿದಿದೆ. ಅವರು ಆರ್. ಎಸ್. ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದು ಎಂದುಕೊಂಡಿದ್ದಾರೆ.
ಇದು ಸಿದ್ದರಾಮಯ್ಯಗೆ ತಿರುಗು ಬಾಣವಾಗುತ್ತದೆ. ಪದೇ ಪದೇ ಆರ್.ಎಸ್. ಎಸ್ ಬಗ್ಗೆ ಮಾತನಾಡಿದರೆ, ಸಿದ್ದರಾಮಯ್ಯಗೆ ಉಳಿಗಾಲವಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗಿದೆ.  ಸಿದ್ದರಾಮಯ್ಯನವರು ಇದನ್ನು ಅರಿತು ಮಾತನಾಡಬೇಕು ಎಂದರು.
ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ನಮ್ಮ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಮತದಾರರ ಒಲವಿದೆ ಪಕ್ಷದ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್ ಉಗ್ರನ ಬಂಧನ; ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ!