ನವದೆಹಲಿ : ಪ್ರಜಾಪ್ರಭುತ್ವ ಸುಧಾರಣಾ ಸಂಘಟನೆ (ಎಡಿಆರ್) ದೇಶದ 29 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಆಸ್ತಿಯ ಪಟ್ಟಿಯೊಂದನ್ನು ಸೋಮವಾರ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ 6ನೇ ಶ್ರೀಮಂತ ಸಿಎಂ ಎಂದೆನಿಸಿಕೊಂಡಿದ್ದಾರೆ.
ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ ಆಧಾರದ ಮೇಲೆ ಈ ಪಟ್ಟಿಯನ್ನು ತಯಾರಿಸಲಾಗಿದ್ದು, ಇದರಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು 177 ಕೋಟಿ ರೂ. ಆಸ್ತಿ ಹೊಂದಿರುವ ಕಾರಣ ದೇಶದ ನಂ.1 ಶ್ರೀಮಂತ ಸಿಎಂ ಎಂದು ಹೊರಹೊಮ್ಮಿದ್ದಾರೆ. ಹಾಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 13 ಕೋಟಿ ರೂ. ಆಸ್ತಿಯನ್ನು ಹೊಂದಿರುವುದರಿಂದ 6ನೇ ಸ್ಥಾನ ಪಡೆದಿದ್ದಾರೆ. ಹಾಗೇ 26 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊದಿರುವ ಕಾರಣ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಕೊನೇ ಸ್ಥಾನದಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ