Publish Date: Thu, 03 Aug 2023 (07:13 IST)
Updated Date: Thu, 03 Aug 2023 (08:14 IST)
ನವದೆಹಲಿ : ಹೈಕಮಾಂಡ್ ಜೊತೆ ಹೈವೋಲ್ಟೇಜ್ ಸಭೆಯ ಹಿನ್ನೆಲೆ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಭೇಟಿಗೆ ಪ್ರಧಾನಿ ಮೋದಿ ಸಮಯವನ್ನು ಕೊಟ್ಟಿದ್ದಾರೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿ ಅವರನ್ನು ಭೇಟಿ ಮಾಡುತ್ತಿದ್ದಾರೆ. ಈ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಅಕ್ಕಿ ನೀಡುವಂತೆ ಮನವಿ ಮಾಡಬಹುದು ಎಂಬ ಮಾತು ಕೇಳಿ ಬಂದಿದೆ.
ರಾಜ್ಯದಲ್ಲಿನ ಅನ್ನಭಾಗ್ಯದ ಪರಿಸ್ಥಿತಿ ಬಗ್ಗೆ ವಿವರಣೆ ಕೊಡಲಿರುವ ಸಿಎಂ ಸಿದ್ದರಾಮಯ್ಯ, ಅಕ್ಕಿ ಖರೀದಿಗೆ ರಾಜ್ಯದ ಪ್ರಯತ್ನ, ಅಕ್ಕಿ ಅಲಭ್ಯತೆ, ಅಕ್ಕಿ ಬದಲು ಹಣ ಕೊಡುತ್ತಿರುವ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಕೊಡಿಸುವಂತೆಯೂ ಮನವಿ ಮಾಡಲಿದ್ದಾರೆ.