ನ್ಯಾಯಾಲಯಕ್ಕೆ ಶರಣಾದ ಸಿಧು?

Webdunia
ಶುಕ್ರವಾರ, 20 ಮೇ 2022 (15:26 IST)
ಚಂಡೀಗಢ : 34 ವರ್ಷದ ಹಿಂದಿನ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
 
ಇಂದು ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಕಾರಿನಲ್ಲಿ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ. ಈ ಬಗ್ಗೆ ಸಿಧು ಅವರ ಮಾಧ್ಯಮ ಸಲಹೆಗಾರ ಸುರೇಂದರ್ ದಲ್ಲಾ ಪ್ರತಿಕ್ರಿಯಿಸಿ, ಪಟಿಯಾಲದ ಮುಖ್ಯ ನ್ಯಾಯಾಧೀಶರ ಮುಂದೆ ಸಿಧು ಶರಣಾಗಿದ್ದಾರೆ.

ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ.  ಇಂದು ಬೆಳಗ್ಗೆ ನ್ಯಾಯಾಲಯದ ಮುಂದೆ ಶರಣಾಗಲು ಕೆಲವು ವಾರಗಳ ಸಮಯಬೇಕು ಎಂದು ಸಿಧು ಸುಪ್ರೀಂ ಕೋರ್ಟ್ನಲ್ಲಿ ಮನವಿ ಮಾಡಿದ್ದರು.

ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments