Select Your Language

Notifications

webdunia
webdunia
webdunia
webdunia

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Actor Sushant Singh, Death of Disha Salian, Bombay High Court
Photo Courtesy X
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ 2020ರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವಹಿಸಿ ಹೈಕೋರ್ಟ್ ಆದೇಶಿಸಿದೆ.

ದಿಶಾ ಸಾಲಿಯಾನ್ ಸಾವಿನ ಈ ಹೊಸ ಬೆಳವಣಿಗೆಯು ಈಗ ಚಿತ್ರರಂಗ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಿಶಾ ಸಾಲಿಯಾನ್ ಸಾವು ಸಂಬಂಧ ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಅವರನ್ನು ತನಿಖೆಗೆ ಒಳಪಡಿಸುವಂತೆ ಆಕೆಯ ತಂದೆ ಒತ್ತಾಯಿಸಿದ್ದರು.

2020ರ ಜೂನ್ 8ರಂದು ಮುಂಬೈನ ಮಲಾಡ್ ಪ್ರದೇಶದ ವಸತಿ ಸಂಕೀರ್ಣವೊಂದರ 14ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಮೃತಪಟ್ಟಿದ್ದರು. ಮುಂಬೈ ಪೊಲೀಸರು ಆರಂಭದಲ್ಲಿ ಇದನ್ನು ಆಕಸ್ಮಿಕ ಸಾವು ಎಂದು ದಾಖಲಿಸಿಕೊಂಡು, ತನಿಖೆಯ ಬಳಿಕ ಇದು ಆತ್ಮಹತ್ಯೆ ಎಂದು ತಿಳಿಸಿದ್ದರು.

ದಿಶಾ ಸಾಲಿಯಾನ್ ಅವರ ತಂದೆ ಸತೀಶ್ ಸಾಲಿಯಾನ್ ಅವರು ತಮ್ಮ ಮಗಳ ಸಾವಿನ ಬಗ್ಗೆ ತೀವ್ರ ಅನುಮಾನ ವ್ಯಕ್ತಪಡಿಸಿದ್ದರು. ತಮ್ಮ ಮಗಳು ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಾಳೆ ಎಂದು ಆರೋಪಿಸಿ ಹಾಗೂ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲು ಪ್ರಕರಣವನ್ನು ಮುಚ್ಚಿಹಾಕಲಾಗಿದೆ ಎಂದು ಆರರಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ನ್ಯಾಯಪೀಠವು, ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ. ಅಲ್ಲದೆ, ಪ್ರಕರಣದ ತನಿಖೆಯನ್ನು ಹಿರಿಯ ಮತ್ತು ಅನುಭವಿ ಅಧಿಕಾರಿಗೆ ವಹಿಸುವಂತೆ ನಿರ್ದೇಶಿಸಿದೆ.

ತನಿಖೆ ಆರಂಭವಾಗುವ ಹಂತದಲ್ಲೇ ಯಾರನ್ನೂ ನೇರವಾಗಿ ಆರೋಪಿ ಎಂದು ಪರಿಗಣಿಸಬಾರದು ಎಂದಿರುವ ಕೋರ್ಟ್, ತನಿಖೆಯ ಬಳಿಕ ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.


 

Share this Story:

Follow Webdunia kannada

ಮುಂದಿನ ಸುದ್ದಿ

ಹಾವು ಹಿಡಿಯುತ್ತಿದ್ದಾಗ ಅರೆಗಳಿಗೆ ಎಚ್ಚರ ತಪ್ಪಿದ್ದಷ್ಟೇ… ಉರಗ ತಜ್ಞ ಸ್ಥಳದಲ್ಲೇ ಸಾವು: ಶಾಕಿಂಗ್ ವಿಡಿಯೋ ಇಲ್ಲಿದೆ