Publish Date: Fri, 02 Mar 2018 (07:21 IST)
Updated Date: Fri, 02 Mar 2018 (07:24 IST)
ನವದೆಹಲಿ: ಸರಳ ಮದುವೆಗೆ ಉದಾಹರಣೆಯಾಗಿ ರೈಲಿನಲ್ಲಿ ಮದುವೆಯೊಂದು ನಡೆದಿದ್ದು, ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಅವರು ಈ ಮದುವೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿಕೊಟ್ಟಿದ್ದಾರೆ.
‘ಫಾರ್ಮಸಿಸ್ಟ್ ಆಗಿರುವ ಸಚಿನ್ ಕುಮಾರ್ ಮತ್ತು ಕಂದಾಯ ಇಲಾಖೆ ಉದ್ಯೋಗಿ ಜ್ಯೋತ್ಸ್ನಾ ಉತ್ತರ ಪ್ರದೇಶದ ಗೋರಖ್‌ಪುರ ಮತ್ತು ಲಖನೌ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಈ ಮದುವೆಯಾಗಿದ್ದಾರೆ’ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
‘ಮದುವೆ ಸರಳವಾಗಿರಬೇಕು ಎಂಬ ಸಂದೇಶವನ್ನು ಈ ಮೂಲಕ ಎಲ್ಲೆಡೆ ಸಾರಲು ಇಚ್ಛಿಸುತ್ತೇನೆ. ಈ ರೀತಿ ಮದುವೆಯಾದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವುದು, ಮದುವೆಗಾಗಿ ಸಾಲ ಮಾಡುವುದನ್ನು ತಪ್ಪಿಸಬಹುದು’ ಎಂದು ‘ಆರ್ಟ್ ಆಫ್ ಲಿವಿಂಗ್’ ಬಿಡುಗಡೆ ಮಾಡಿರುವ ವಿಡಿಯೊ ಸಂದೇಶದಲ್ಲಿ ಶ್ರೀ ಶ್ರೀ ರವಿಶಂಕರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ