ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿ!

Webdunia
ಮಂಗಳವಾರ, 30 ಆಗಸ್ಟ್ 2022 (13:35 IST)
ರಾಂಚಿ : ಮಾತನಾಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಮಲಗಿದ್ದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

12ನೇ ತರಗತಿಯಲ್ಲಿ ಓದುತ್ತಿದ್ದ 19 ವರ್ಷದ ಯುವತಿಯನ್ನು ಮೊದಲು ದುಮ್ಕಾದ ಫುಲೋ ಜಾನೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶೇಕಡಾ 90ರಷ್ಟು ದೇಹ ಸುಟ್ಟು ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಭಾನುವಾರ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಇದೀಗ ಮರಣೋತ್ತರ ಪರೀಕ್ಷೆಯ ನಂತರ ಆಕೆಯ ಶವವನ್ನು ದುಮ್ಕಾಗೆ ಕಳುಹಿಸಲಾಗುತ್ತದೆ.

ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಶಾರುಖ್ ಎಂದು ಗುರುತಿಸಲಾಗಿದ್ದು, ಇದೀಗ ಆತನನ್ನು ಬಂಧಿಸಲಾಗಿದೆ. ಯುವತಿ ಮಲಗಿದ್ದ ವೇಳೆ ಕಿಟಕಿಯಿಂದ ಪೆಟ್ರೋಲ್ ಸುರಿದು ಆರೋಪಿ ಬೆಂಕಿ ಹಚ್ಚಿದ್ದಾನೆ ಎಂದು ದುಮ್ಕಾ ಪಟ್ಟಣ  ಪೊಲೀಸ್ ಠಾಣೆ ಪ್ರಭಾರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments