Select Your Language

Notifications

webdunia
webdunia
webdunia
webdunia

ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ
ಮುಂಬೈ , ಭಾನುವಾರ, 6 ಫೆಬ್ರವರಿ 2022 (07:37 IST)
ಮುಂಬೈ : ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಕೊನೆಯುಸಿರೆಳದಿದ್ದಾರೆ.

ಮುಂಬೈನ ಕ್ಯಾಂಡಿ ಆಸ್ಪತ್ರೆಯ ತ್ರೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲ ಅಗಲಿದ್ದಾರೆ.

ಸೋಂಕಿನ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು.

ಲತಾ ಮಂಗೇಶ್ಕರ್ (ಸೆಪ್ಟೆಂಬರ್ 28, 1929) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ.

1967ರಲ್ಲಿ ಬಿಡುಗಡೆಯಾದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಕನ್ನಡ ಚಲನಚಿತ್ರದಲ್ಲಿನ “ಬೆಳ್ಳನೆ ಬೆಳಗಾಯಿತು” ಮತ್ತು “ಎಲ್ಲಾರೆ ಇರತೀರೋ ಎಂದಾರೆ ಬರತೀರೋ” ಹಾಡುಗಳನ್ನು ಹಾಡಿದ್ದಾರೆ.

10,000ಕ್ಕೂ ಹೆಚ್ಚು ಹಾಡುಗಳನ್ನು 22 ಭಾಷೆಗಳಲ್ಲಿ ಹಾಡಿದ್ದಾರೆ. ಅಮೆರಿಕ, ಯೂರೊಪ್ ಸುತ್ತಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆಕೆಯ ಹಾಡುಗಳ ವಿಶೇಷವೆಂದರೆ, ಅಸಾಧಾರಣ ಸ್ಪಷ್ಟ ಶಬ್ದೋಚ್ಚಾರ, ಶಾಸ್ತ್ರೀಯ ಸಂಗೀತದ ಸ್ವರಬದ್ಧ ಸಂಸ್ಕಾರ, ಗೀತೆಗಳ ಗುಣಮಟ್ಟ, ಸನ್ನಿವೇಶಕ್ಕೆ ನಟಿಯರ ಕಂಠಕ್ಕೆ ಸರಿಯಾಗಿ ಅಳವಡಿಸಿಹಾಡುವ ಕಲೆ ಇವರಗಿತ್ತು.
v

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀರಂಗಪಟ್ಟಣ-ಗುಡ್ಡೆಹೊಸೂರು; 4 ಪಥ ರಸ್ತೆ ನಿರ್ಮಾಣಕ್ಕೆ ಶೀಘ್ರ ಚಾಲನೆ: ಪ್ರತಾಪ್ ಸಿಂಹ