Select Your Language

Notifications

webdunia
webdunia
webdunia
webdunia

ಕುಟುಂಬಕ್ಕೆ ಒಂದೇ ಟಿಕೆಟ್‌: ಕಾಂಗ್ರೆಸ್‌ ಹೊಸ ರೂಲ್ಸ್

ಕುಟುಂಬಕ್ಕೆ ಒಂದೇ ಟಿಕೆಟ್‌: ಕಾಂಗ್ರೆಸ್‌ ಹೊಸ ರೂಲ್ಸ್
ಉದಯಪುರ , ಶನಿವಾರ, 14 ಮೇ 2022 (10:46 IST)
ಉದಯಪುರ: ಸತತ 2 ಲೋಕಸಭಾ ಸೋಲು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಸರಣಿ ಸೋಲಿನಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್‌, ಶುಕ್ರವಾರದಿಂದ ಇಲ್ಲಿ ಆರಂಭವಾದ ಪಕ್ಷದ 3 ದಿನದ ಚಿಂತನ ಶಿಬಿರದಲ್ಲಿ ‘ಒಂದು ಕುಟುಂಬ, ಒಂದು ಟಿಕೆಟ್‌’, ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡುವ ವೇಳೆ ವಯೋಮಿತಿ ನಿಗದಿ, ಎಲ್ಲಾ ಹಂತದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಹಲವು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
 
ಕಾಂಗ್ರೆಸ್‌ ಪಕ್ಷದಲ್ಲಿ ವಂಶಪಾರಂಪರ್ಯ ರಾಜಕೀಯ ನಡೆಸಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಲು ಪಕ್ಷ ಈ ಕ್ರಮ ಕೈಗೊಳ್ಳುತ್ತಿದೆ. ಆದರೆ ಪಕ್ಷದಲ್ಲಿ ಕನಿಷ್ಠ 5 ವರ್ಷ ಕಾಲ ಅಪ್ರತಿಮ ಸೇವೆ ಸಲ್ಲಿಸಿದವರಿಗೆ ‘ಒಂದು ಕುಟುಂಬ, ಒಂದು ಟಿಕೆಟ್‌’ ನೀತಿಯಿಂದ ವಿನಾಯ್ತಿ ಸಿಗಲಿದ್ದು, ಇಂಥವರು ಒಂದೇ ಕುಟುಂಬದಲ್ಲಿದ್ದರೂ ಟಿಕೆಟ್‌ ಗಿಟ್ಟಿಸಬಹುದಾಗಿದೆ.
 
ಇದೇ ವೇಳೆ, 50-60 ವರ್ಷದಿಂದ ನಿಂತ ನೀರಾಗಿದ್ದ ಪಕ್ಷ ಸಂಘಟನೆಯಲ್ಲಿ ವ್ಯಾಪಕ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ. ಈಗಿರುವ ಬೂತ್‌ ಹಾಗೂ ಬ್ಲಾಕ್‌ ಮಟ್ಟದ ಸಮಿತಿಗಳ ಮಧ್ಯದಲ್ಲಿ ‘ಮಂಡಲ ಕಮಿಟಿ’ಗಳನ್ನು ರಚಿಸುವ ಪರಿಶೀಲನೆ ನಡೆದಿದೆ. ಯುವಕರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪಕ್ಷದ ಎಲ್ಲ ಕಮಿಟಿಗಳಲ್ಲಿ 50 ವರ್ಷಕ್ಕಿಂತ ಕೆಳಗಿರುವವರಿಗೆ ಆದ್ಯತೆ ನೀಡಲಾಗುತ್ತದೆ.
 
ಪಕ್ಷದಲ್ಲಿ ಯಾವುದಾದರೂ ಸ್ಥಾನ ಬೇಕು ಎಂದರೆ ಪಕ್ಷದಲ್ಲಿ ಆತ ಕನಿಷ್ಠ 3ರಿಂದ 5 ವರ್ಷ ದುಡಿದಿರಬೇಕು. ಪಕ್ಷದಲ್ಲಿನ ಪದಾಧಿಕಾರಿಗಳ ಸಾಧನೆ ಅಳೆದು ಅವರಿಗೆ ಪದೋನ್ನತಿ ನೀಡಲು ‘ಮೌಲ್ಯಮಾಪನ ವಿಭಾಗ’ ಹಾಗೂ ಜನರ ನಾಡಿಮಿಡಿತ ಅರಿಯಲು ‘ಸಾರ್ವಜನಿಕ ದೂರದೃಷ್ಟಿವಿಭಾಗ’ ರಚನೆ ಮಾಡಬೇಕು ಎಂಬ ಪ್ರಸ್ತಾವಗಳೂ ಚಿಂತನ ಶಿಬಿರದಲ್ಲಿವೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕುರಿ ಕಳ್ಳತನ: ಅಡ್ಡ ಬಂದವರ ಪ್ರಾಣ ತೆಗೆಯುತ್ತಿದ್ದ ಗ್ಯಾಂಗ್ ಬಂಧನ