Webdunia - Bharat's app for daily news and videos

Install App

ಕುಟುಂಬಕ್ಕೆ ಒಂದೇ ಟಿಕೆಟ್‌: ಕಾಂಗ್ರೆಸ್‌ ಹೊಸ ರೂಲ್ಸ್

Webdunia
ಶನಿವಾರ, 14 ಮೇ 2022 (10:46 IST)
ಉದಯಪುರ: ಸತತ 2 ಲೋಕಸಭಾ ಸೋಲು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಸರಣಿ ಸೋಲಿನಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್‌, ಶುಕ್ರವಾರದಿಂದ ಇಲ್ಲಿ ಆರಂಭವಾದ ಪಕ್ಷದ 3 ದಿನದ ಚಿಂತನ ಶಿಬಿರದಲ್ಲಿ ‘ಒಂದು ಕುಟುಂಬ, ಒಂದು ಟಿಕೆಟ್‌’, ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡುವ ವೇಳೆ ವಯೋಮಿತಿ ನಿಗದಿ, ಎಲ್ಲಾ ಹಂತದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಹಲವು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
 
ಕಾಂಗ್ರೆಸ್‌ ಪಕ್ಷದಲ್ಲಿ ವಂಶಪಾರಂಪರ್ಯ ರಾಜಕೀಯ ನಡೆಸಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಲು ಪಕ್ಷ ಈ ಕ್ರಮ ಕೈಗೊಳ್ಳುತ್ತಿದೆ. ಆದರೆ ಪಕ್ಷದಲ್ಲಿ ಕನಿಷ್ಠ 5 ವರ್ಷ ಕಾಲ ಅಪ್ರತಿಮ ಸೇವೆ ಸಲ್ಲಿಸಿದವರಿಗೆ ‘ಒಂದು ಕುಟುಂಬ, ಒಂದು ಟಿಕೆಟ್‌’ ನೀತಿಯಿಂದ ವಿನಾಯ್ತಿ ಸಿಗಲಿದ್ದು, ಇಂಥವರು ಒಂದೇ ಕುಟುಂಬದಲ್ಲಿದ್ದರೂ ಟಿಕೆಟ್‌ ಗಿಟ್ಟಿಸಬಹುದಾಗಿದೆ.
 
ಇದೇ ವೇಳೆ, 50-60 ವರ್ಷದಿಂದ ನಿಂತ ನೀರಾಗಿದ್ದ ಪಕ್ಷ ಸಂಘಟನೆಯಲ್ಲಿ ವ್ಯಾಪಕ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ. ಈಗಿರುವ ಬೂತ್‌ ಹಾಗೂ ಬ್ಲಾಕ್‌ ಮಟ್ಟದ ಸಮಿತಿಗಳ ಮಧ್ಯದಲ್ಲಿ ‘ಮಂಡಲ ಕಮಿಟಿ’ಗಳನ್ನು ರಚಿಸುವ ಪರಿಶೀಲನೆ ನಡೆದಿದೆ. ಯುವಕರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪಕ್ಷದ ಎಲ್ಲ ಕಮಿಟಿಗಳಲ್ಲಿ 50 ವರ್ಷಕ್ಕಿಂತ ಕೆಳಗಿರುವವರಿಗೆ ಆದ್ಯತೆ ನೀಡಲಾಗುತ್ತದೆ.
 
ಪಕ್ಷದಲ್ಲಿ ಯಾವುದಾದರೂ ಸ್ಥಾನ ಬೇಕು ಎಂದರೆ ಪಕ್ಷದಲ್ಲಿ ಆತ ಕನಿಷ್ಠ 3ರಿಂದ 5 ವರ್ಷ ದುಡಿದಿರಬೇಕು. ಪಕ್ಷದಲ್ಲಿನ ಪದಾಧಿಕಾರಿಗಳ ಸಾಧನೆ ಅಳೆದು ಅವರಿಗೆ ಪದೋನ್ನತಿ ನೀಡಲು ‘ಮೌಲ್ಯಮಾಪನ ವಿಭಾಗ’ ಹಾಗೂ ಜನರ ನಾಡಿಮಿಡಿತ ಅರಿಯಲು ‘ಸಾರ್ವಜನಿಕ ದೂರದೃಷ್ಟಿವಿಭಾಗ’ ರಚನೆ ಮಾಡಬೇಕು ಎಂಬ ಪ್ರಸ್ತಾವಗಳೂ ಚಿಂತನ ಶಿಬಿರದಲ್ಲಿವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments