Daily Horoscope

Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

Gyanesh Kumar
ಬೆಂಗಳೂರು: ಕರ್ನಾಟಕದಲ್ಲೂ ಮತದಾರರ ಪಟ್ಟಿ ಸದ್ಯದಲ್ಲೇ ಶುರುವಾಗಲಿದೆ. ಯಾವಾಗ ಇತ್ಯಾದಿ ಎಲ್ಲಾ ವಿವರ ಇಲ್ಲಿದೆ ನೋಡಿ.

ಚುನಾವಣಾ ಆಯೋಗವು ಮೇ 30 ರಿಂದ ಮೂರನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಅದರಂತೆ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ. ಈ ಪೈಕಿ ಕರ್ನಾಟಕವೂ ಸೇರಿದೆ.

ಮೊದಲ ಎರಡು ಹಂತಗಳಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು, ರಾಜಕೀಯ ಪಕ್ಷಗಳು ನೇಮಿಸಿರುವ 3.42 ಲಕ್ಷ ಬೂತ್ ಮಟ್ಟದ ಏಜೆಂಟರುಗಳ ಸಹಾಯದೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ.

ಸುಮಾರು 36.73 ಕೋಟಿ ಮತದಾರರ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ದಾದ್ರಾ ನಗರ ಹವೆಲಿ ಮತ್ತು ದಮನ್ ದಿಯು, ಉತ್ತರಾಖಂಡ,  ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಢೀಗಡ, ತೆಲಂಗಾಣ, ಪಂಜಾಬ್, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ದೆಹಲಿ, ನಾಗಾಲ್ಯಾಂಡ್, ತ್ರಿಪುರಾದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ.

ಕರ್ನಾಟಕದಲ್ಲಿ ಅಕ್ಟೋಬರ್ 1 ಅರ್ಹತಾ ದಿನವಾಗಿದೆ. ಜೂನ್ 20 ರಿಂದ 29 ರವರೆಗೆ ನಮೂನೆಗಳ ಸಿದ್ಧತೆ, ತರಬೇತಿ, ಮುದ್ರಣ ನಡೆಯಲಿದೆ. ಜೂನ್ 30 ರಿಂದ ಜುಲೈ 29 ರವರೆಗೆ ಬಿಎಲ್ಒಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.  ಆಗಸ್ಟ್ 5 ರಂದು ಕರಡು ಮತಪಟ್ಟಿ ಪ್ರಕಟವಾಗಲಿದೆ. ಆಗಸ್ಟ್ 5 ರಿಂದ ಸೆಪ್ಟೆಂಬರ್ 3 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇವುಗಳ ವಿಲೇವಾರಿ ಅಕ್ಟೋಬರ್ 3 ರವರೆಗೆ ನಡೆಯಲಿದೆ. ಅಕ್ಟೋಬರ್ 7 ರಂದು ಅಂತಿಮ ಪಟ್ಟಿ ಸಿದ್ಧವಾಗಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ