Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಭೀಕರ ರಸ್ತೆ ಅಪಘಾತಕ್ಕೆ ಆರು ಬಲಿ!

webdunia
ಶನಿವಾರ, 20 ಆಗಸ್ಟ್ 2022 (10:34 IST)
ಜೈಪುರ : ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಾರೀ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ. 

ಯಾತ್ರಾರ್ಥಿಗಳು ಜೈಸಲ್ಮೇರ್ನ ರಾಮದೇವ್ರಾದ ಬಾಬಾ ರಾಮ್ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದಾರೆ. 


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸಿಬಿಐ : ಐಎಎಸ್ ಅಧಿಕಾರಿಗಳ ವರ್ಗಾವಣೆ