Publish Date: Thu, 18 May 2023 (12:58 IST)
Updated Date: Thu, 18 May 2023 (12:36 IST)
ಭೋಪಾಲ್ : ಟ್ರಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯ ಪ್ರದೇಶದ ಶಾಜಾಪುರದಲ್ಲಿ ಈ ಘಟನೆ ನಡೆದಿದ್ದು, ಹಲವು ಪ್ರಯಾಣಿಕರನ್ನು ಒಳಗೊಂಡ ಸ್ಲೀಪರ್ ಬಸ್ ಅಹಮದಾಬಾದ್ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಬಸ್ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ತರಾನ, ಕಾಯ್ತ ಮತ್ತು ಮಕ್ಸಿ ಪೊಲೀಸ್ ಠಾಣೆಯ ತಂಡಗಳನ್ನು ಸ್ಥಳಕ್ಕೆ ಕಳುಹಿಸಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಘಟನೆಯಿಂದ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತರಲು ಹರಸಾಹಸ ಪಟ್ಟಿದ್ದು, ಗ್ರಾಮಸ್ಥರು ಪೊಲೀಸರಿಗೆ ಸಾಥ್ ನೀಡಿದ್ದಾರೆ.