ನವದೆಹಲಿ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಅವರ ಪುತ್ರಿ ಗೋವಾದ ಬಾರ್ ಹಾಗೂ ರೆಸ್ಟೋರೆಂಟ್ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಗಂಭೀರ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು 2 ಕೋಟಿ ಸಿವಿಲ್ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ದಾಖಲೆಗಳನ್ನು ಪರಿಶೀಲಿಸಿ, ಕಾಂಗ್ರೆಸ್ ಮುಖಂಡರು ಬಿಜೆಪಿಯ ನಾಯಕಿ ಸ್ಮೃತಿ ಇರಾನಿ ಹಾಗೂ ಅವರ ಪುತ್ರಿಯ ಮೇಲೆ ಸುಳ್ಳು ಆರೋಪವನ್ನು ಮಾಡುವ ಮೂಲಕ ವೈಯಕ್ತಿಕವಾಗಿ ದಾಳಿ ನಡೆಸಲು ಪಿತೂರಿ ನಡೆಸುತ್ತಿದ್ದಾರೆ.
ದಾಖಲೆಯಲ್ಲಿರುವ ಸಾಕ್ಷಿಗಳನ್ನು ಪರಿಗಣಿಸಿದರೆ ಸ್ಮೃತಿ ಇರಾನಿ ಹಾಗೂ ಅವರ ಮಗಳ ಪರವಾಗಿ ಯಾವುದೇ ಲೈಸನ್ಸ್ಗಳಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಇದರಿಂದಾಗಿ ಸ್ಮೃತಿ ಇರಾನಿ ಮಗಳು ರೆಸ್ಟೋರೆಂಟ್ನ ಮಾಲೀಕರಲ್ಲ ಎಂದು ಸ್ಪಷ್ಟಪಡಿಸಿದೆ.