Webdunia - Bharat's app for daily news and videos

Install App

ಸೋಲಾರ್ ಮಿಷನ್ ‘ಆದಿತ್ಯ’ ಸೆಪ್ಟೆಂಬರ್‌ನಲ್ಲಿ ಲಾಂಚ್‍ಗೆ ಸಿದ್ಧ: ಸೋಮನಾಥ್

Webdunia
ಗುರುವಾರ, 24 ಆಗಸ್ಟ್ 2023 (15:44 IST)
ಬೆಂಗಳೂರು : ಚಂದ್ರನ ದಕ್ಷಿಣ ಧ್ರುವಕ್ಕೆ ಲ್ಯಾಂಡರ್ ವಿಕ್ರಮ್ನ್ನು ಯಶಸ್ವಿಯಾಗಿ ಇಳಿಸಿದ ಇಸ್ರೋ, ಇದೀಗ ಸೂರ್ಯನ ಅಧ್ಯಯನಕ್ಕೆ ಸಜ್ಜಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸೋಲಾರ್ ಮಿಷನ್ ‘ಆದಿತ್ಯ’ ಇದೇ ಸೆಪ್ಟೆಂಬರ್ಗೆ ಲಾಂಚ್ ಆಗಲು ಸಿದ್ಧವಾಗುತ್ತಿದೆ ಎಂದು ತಿಳಿಸಿದ್ದಾರೆ.ಚಂದ್ರಯಾನ-3  ಯಶಸ್ವಿಯಾದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಮಿಷನ್ ‘ಆದಿತ್ಯ’ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಲಾಂಚ್ಗೆ ಸಿದ್ಧವಾಗಲಿದೆ.

2025 ರ ವೇಳೆಗೆ ಬಾಹ್ಯಾಕಾಶಕ್ಕೆ ಮಾನವಸಹಿತ ಮಿಷನ್ ಕೈಗೊಳ್ಳಲು ಯೋಜಿಸಿದ್ದು, ಕ್ರ್ಯೂ ಮಾಡ್ಯೂಲ್ (ಗಗನಯಾತ್ರಿಗಳಿರುವ ಘಟಕ) ಸಾಮರ್ಥ್ಯ ಪರೀಕ್ಷಾ ಕಾರ್ಯಾಚರಣೆಗಳನ್ನು ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ತಿಂಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ದಕ್ಷಿಣ ಧ್ರುವವು ಸೂರ್ಯನಿಂದ ಕಡಿಮೆ ಪ್ರಕಾಶಮಾನವನ್ನು ಪಡೆಯುತ್ತದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಾಗಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಗಳು ದಕ್ಷಿಣ ಧ್ರುವದ ಕುರಿತಾಗಿ ಆಸಕ್ತಿ ತೋರಿಸಿದ್ದಾರೆ. ಮನುಷ್ಯ ಚಂದ್ರನ ಮೇಲೆ ವಸಾಹತುಗಳನ್ನು ಸ್ಥಾಪಿಸುವುದು ಮತ್ತು ಅದರ ಆಚೆಗೆ ಬೆಳೆಯುವುದು ಅದರ ಉದ್ದೇಶವಾಗಿದೆ. ಚಂದ್ರಯಾನ-3 ಮಿಷನ್ನ ಯಶಸ್ಸಿಗೆ ಕಾರಣರಾದ ಎಲ್ಲಾ ವಿಜ್ಞಾನಿಗಳಿಗೆ ಇದು ಸಂತೋಷದ ವಿಚಾರವಾಗಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments