ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕೆ ಬಿಹಾರ್ ಪೊಲೀಸರು ಸೈನಿಕನೊಬ್ಬನನ್ನು ಬಂಧಿಸಿದ್ದಾರೆ.
ತನ್ನ ಪರಿವಾರದವರೊಂದಿಗೆ ಬಾಲಕಿ ದೆಹಲಿಯಿಂದ ಬಿಹಾರ ರಾಜ್ಯದಲ್ಲಿ ಬರುವ ಬೆಗುಸರೈ ಜಿಲ್ಲೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿ-ದಿಬ್ರುಗಡ್ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಸೈನಿಕನೊಬ್ಬ ಬಾಲಕಿಯ ಮೇಲೆ ಲೈಂಗಿಕ ಶೋಷಣೆಯನ್ನು ನಡೆಸಿದ್ದಾನೆ ಎಂದು ಕುಟುಂಬದವರು ರೇಲ್ವೈ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ ಸೈನಿಕನನ್ನು ಬಂಧಿಸಲಾಗಿದೆ ಎಂದು ಸರಕಾರಿ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಟ್ಣಾದಲ್ಲಿ ಈ ಕುರಿತು ದೂರು ದಾಖಲಾಗುತ್ತಿದ್ದಂತೆ ಸರಕಾರಿ ರೈಲ್ವೆ ಪೊಲೀಸ್ ತಂಡ ಪಟ್ಣಾ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ಅಜಿತ್ ಸಿಂಗ್ ಎಂದು ಗುರುತಿಸಲಾಗಿದ್ದು ಆತ ಜಬಲ್ಪುರದಲ್ಲಿ ಸೇವೆ ಸಲ್ಲಿಸುತ್ತಿದ್ದ.