Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಗೆ ಲೈಂಗಿಕ ಹಿಂಸೆ ನೀಡಿದ ಸೈನಿಕ

Webdunia
ಶುಕ್ರವಾರ, 30 ಜನವರಿ 2015 (18:20 IST)
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕೆ ಬಿಹಾರ್ ಪೊಲೀಸರು ಸೈನಿಕನೊಬ್ಬನನ್ನು ಬಂಧಿಸಿದ್ದಾರೆ.
 
ತನ್ನ ಪರಿವಾರದವರೊಂದಿಗೆ ಬಾಲಕಿ ದೆಹಲಿಯಿಂದ ಬಿಹಾರ ರಾಜ್ಯದಲ್ಲಿ ಬರುವ  ಬೆಗುಸರೈ ಜಿಲ್ಲೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. 
 
ದೆಹಲಿ-ದಿಬ್ರುಗಡ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೈನಿಕನೊಬ್ಬ ಬಾಲಕಿಯ ಮೇಲೆ ಲೈಂಗಿಕ ಶೋಷಣೆಯನ್ನು ನಡೆಸಿದ್ದಾನೆ ಎಂದು ಕುಟುಂಬದವರು ರೇಲ್ವೈ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ ಸೈನಿಕನನ್ನು ಬಂಧಿಸಲಾಗಿದೆ ಎಂದು ಸರಕಾರಿ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 
ಪಟ್ಣಾದಲ್ಲಿ ಈ ಕುರಿತು ದೂರು ದಾಖಲಾಗುತ್ತಿದ್ದಂತೆ ಸರಕಾರಿ ರೈಲ್ವೆ ಪೊಲೀಸ್ ತಂಡ ಪಟ್ಣಾ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದೆ ಎಂದು ತಿಳಿದುಬಂದಿದೆ. 
 
ಆರೋಪಿಯನ್ನು ಅಜಿತ್ ಸಿಂಗ್ ಎಂದು ಗುರುತಿಸಲಾಗಿದ್ದು ಆತ ಜಬಲ್ಪುರದಲ್ಲಿ ಸೇವೆ ಸಲ್ಲಿಸುತ್ತಿದ್ದ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ