Publish Date: Mon, 13 Aug 2018 (09:29 IST)
Updated Date: Mon, 13 Aug 2018 (09:31 IST)
ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್, ಸಿಪಿಎಂ ನಾಯಕ ಸೋಮನಾಥ ಚ್ಯಾಟರ್ಜಿ ಇಂದು ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೋಮನಾಥ ಚ್ಯಾಟರ್ಜಿ ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೃದಯಾಘಾತವಾಗಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಉಲ್ಬಣಿಸಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 10 ಬಾರಿ ಸಂಸದರು ಮತ್ತು ಲೋಕಸಭೆಯ ಸ್ಪೀಕರ್ ಆಗಿದ್ದ ಸೋಮನಾಥ್ ಚ್ಯಾಟರ್ಜಿ ಅವರ ನಿಧನಕ್ಕೆ ಸಂತಾಪಗಳು. ಅವರ ಕುಟುಂಬಕ್ಕೆ ಅವರ ನಷ್ಟ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.