Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರಿಂದ ಪಾಕ್‌ಗೆ ಬೆಂಬಲ: ಬಿಜೆಪಿ

Webdunia
ಗುರುವಾರ, 18 ಆಗಸ್ಟ್ 2016 (15:16 IST)
ಕೆಲ ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪವನ್ನು ಮಾಡಿದೆ. ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ್ದನ್ನು ಕೆಲವು ಕಾಂಗ್ರೆಸ್ ನಾಯಕರು ವಿರೋಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿಯಲ್ಲಿ ಕಿಡಿಕಾರಿದೆ. 
ಆಗಸ್ಟ್ 12 ರಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರದಾನಿ ಮೋದಿ ಅವರ ಈ  ನಿಲುವಿಗೆ ಮುಖ್ಯ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಬೆಂಬಲವನ್ನು ವ್ಯಕ್ತ ಪಡಿಸಿತ್ತು. ಆದರೆ ಸಭೆಯ ಬಳಿಕ 'ಕೈ'ನ ಕೆಲವು ನಾಯಕರು ಮೋದಿ ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದ್ದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿಯಲ್ಲಿ ಪ್ರತಿಕ್ರಿಯಿದೆ.
 
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮೋದಿ ಅವರು ಬಲೂಚಿಸ್ತಾನದ ವಿಷಯ ಪ್ರಸ್ತಾಪಿಸಿದ್ದಕ್ಕೆ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಸಮಾಧಾನ ವ್ಯಕ್ತ ಪಡಿಸಿದ್ದರು. ಪ್ರಧಾನಿ ಮೋದಿ ಬಲೂಚಿಸ್ತಾನದ ವಿಷಯವನ್ನು ಪ್ರಸ್ತಾಪಿಸಿರುವುದು ಭಾರತದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವುದಕ್ಕೆ ಪಾಕ್‌ಗೆ ಅವಕಾಶವನ್ನು ನೀಡಿದಂತಾಗುತ್ತದೆ ಎಂದು ಸಲ್ಮಾನ್ ಹೇಳಿದ್ದರು. ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡುವ ಹಕ್ಕು ನಮಗಿದೆ. ಆದರೆ ಬಲೂಚಿಸ್ತಾನ ಪಾಕ್‌ನ ಆಂತರಿಕ ವಿಷಯ ಎಂದು ಅವರು ಪ್ರಧಾನಿ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದರು.
 
ಅಂತರಾಷ್ಟ್ರೀಯ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಭಾರತ ಒಂದೇ ಧ್ವನಿಯಲ್ಲಿ ಮಾತನಾಡಬೇಕು. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ಏಕಧ್ವನಿಯಲ್ಲಿ ಮಾತನಾಡುವುದಿಲ್ಲ ಎಂದು ಬಿಜೆಪಿ ಕಿಡಿಕಾರಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments