ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ರನ ಕೃತ್ಯದಿಂದಾಗಿ ತಂದೆ ಹರಿಯಾಣಾದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ ಬರಾಲಾ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಪುತ್ರ ವಿಕಾಸ್ ಬರಾಲಾ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಆದರೆ, ರಾಜಕೀಯ ಒತ್ತಡದಿಂದಾಗಿ ಬಂಧನವಾದ ಒಂದು ಗಂಟೆಯಲ್ಲಿಯೇ ಜಾಮೀನು ನೀಡಲಾಗಿತ್ತು.
ವಿಪಕ್ಷವಾದ ಕಾಂಗ್ರೆಸ್ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿ ಸರಕಾರದ ಒತ್ತಡದಿಂದಾಗಿ ಪೊಲೀಸರು ಆರೋಪಿ ವಿಕಾಸ್‌ಗೆ ಜಾಮೀನು ನೀಡಿದ್ದಾರೆ ಎಂದು ಹೇಳಿಕೆ ನೀಡಿತ್ತು.
ಹಲವು ಮಹಿಳಾ ಸಂಘಟನೆಗಳು, ಬಿಜೆಪಿಯ ಸಂಸದರೇ ರಾಜ್ಯಾಧ್ಯಕ್ಷ ,ಸುಭಾಷ್ ಬರಾಲಾ ವಿರುದ್ಧ ಧ್ವನಿಗೂಡಿಸಿದ್ದರಿಂದ ಅನಿವಾರ್ಯವಾಗಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.