ಹೈದರಾಬಾದ್: ಮಾನಸಿಕ ಅಸ್ವಸ್ಥನೊಬ್ಬ ತನ್ನ ತಾಯಿಯ ಮೃತದೇಹದೊಂದಿಗೆ ಮೂರು ದಿನ ಕಳೆದ ಘಟನೆ ನಡೆದಿದೆ.
22 ವರ್ಷದ ಪದವೀಧರನಾಗಿರುವ ಪುತ್ರ ಮಾನಸಿಕವಾಗಿ ಅಸ್ವಸ್ಥ. ಈತನೇ ತನ್ನ ತಾಯಿಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇದೀಗ ತಾಯಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.