ನವದೆಹಲಿ: ಬಿಜೆಪಿ ನಾಯಕಿ, ನಟಿ ಸೊನಾಲಿ ಪೋಘಟ್ ಅನುಮಾನಾಸ್ಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.
									
			
			 
 			
 
 			
			                     
							
							
			        							
								
																	ಸೊನಾಲಿಯದ್ದು ಮೊದಲು ಆತ್ಮಹತ್ಯೆ ಎಂದೇ ನಂಬಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆ ವೇಳೆ ದೇಹದ ಮೇಲೆ ಗಾಯಗಳಾಗಿದ್ದು ಕಂಡುಬಂದಿತ್ತು. ಹೀಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಅವರ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.
									
										
								
																	ಘಟನೆ ಬಳಿಕ ಸಾಕ್ಷ್ಯ ನಾಶಕ್ಕೆ ಪ್ರಯತ್ನ ನಡೆಸಲಾಗಿದೆ. ಫಾರ್ಮ್ ಹೌಸ್ ನಲ್ಲಿದ್ದ ಸಿಸಿಟಿವಿ, ಇತರ ಗ್ಯಾಜೆಟ್ ಗಳು ಕಾಣೆಯಾಗಿವೆ ಎಂಬ ಆರೋಪ ಬಂದಿದೆ. ಹೀಗಾಗಿ ಪೊಲೀಸರು ಈಗ ಕೊಲೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.