ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪ ಹೊತ್ತಿರುವ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸೋನಿ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದ ಮೇಲೆ ಕಳೆದ ವಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತ ರಮೇಶ್ ಭಾರದ್ವಾಜ್ ಅವರನ್ನು ಬಂಧಿಸಲಾಗಿತ್ತು.
ಪಕ್ಷದಲ್ಲಿ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮಹಿಳಾ ಕಾರ್ಯಕರ್ತೆ ಸೋನಿ ಆತ್ಮಹತ್ಯೆಗೆ ಶರಣಾಗಿದ್ದರು. ಶಾಸಕರ ಕಿರುಕಳಕ್ಕೆ ಬೇಸತ್ತು ನನ್ನ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಸೋನಿ ಪೋಷಕರು ಆರೋಪಿಸಿದ್ದರು.
ದೆಹಲಿ ಪೊಲೀಸರು ನೀಡಿರುವ ಮಾಹಿತಿ ಅನ್ವಯ, ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಸಾಮಾಜಿಕ ಜಾಲತಾಣ ವಾಟ್ಸಪ್ನಲ್ಲಿ ದಾಖಲಿಸಿದ ವೀಡಿಯೋ ಕ್ಲಿಪ್ನಲ್ಲಿ ರಮೇಶ್ ಭಾರದ್ವಾಜ್, ರಜನಿಕಾಂತ್ ಹಾಗೂ ಅಮಿತ್ ಕುಮಾರ್ ಅವರು ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯುವಂತೆ ಧಮ್ಕಿ ಹಾಕಿದ್ದರೆಂಬ ಮಾಹಿತಿ ಬಹಿರಂಗಗೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ