Webdunia - Bharat's app for daily news and videos

Install App

ನವದೆಹಲಿಯಲ್ಲಿ ಕಾಂಗ್ರೆಸ್‌ನಿಂದ 'ಪ್ರಜಾಪ್ರಭುತ್ವ ಉಳಿಸಿ' ಮೆರವಣಿಗೆ

Webdunia
ಶುಕ್ರವಾರ, 6 ಮೇ 2016 (11:23 IST)
ಅರುಣಾಚಲಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ನವದೆಹಲಿಯಲ್ಲಿ 'ಪ್ರಜಾಪ್ರಭುತ್ವ ಉಳಿಸಿ' (ಲೋಕತಂತ್ರ ಬಚಾವೋ) ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ. ಜಂತರ್ ಮಂತರ್‌ನಿಂದ-ಸಂಸತ್‌‌ನವರೆಗೆ ಮೆರವಣಿಗೆ ನಡೆಯುತ್ತಿದೆ. 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಬೃಹತ್ ಮೆರವಣಿಗೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
 
ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬರಗಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದ್ದಾರೆ
 
ಪ್ರಜಾಪ್ರಭುತ್ವಕ್ಕೆ ಹಾನಿ ಮಾಡುವ ಯತ್ನ ನಡೆಯುತ್ತಿದೆ. ನಾಗ್ಪುರದಲ್ಲಿರುವವರ ಆಣತಿಯಂತೆ ಸರ್ಕಾರ ಕೆಲಸ ನಡೆಸುತ್ತಿದೆ ಎಂದು ಆರ್‌ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಜಂಟಿಯಾಗಿ ಸೋನಿಯಾ ಕಿಡಿಕಾರಿದ್ದಾರೆ. 
 
ಬೇರೆ ಬೇರೆ ರಾಜ್ಯಗಳಲ್ಲಿನ ಕಾಂಗ್ರೆಸ್ ಸರ್ಕಾರ ಉರುಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ. ದೇಶದಲ್ಲಿ ಮೋದಿ ಮತ್ತು ಮೋಹನ್ ಭಾಗ್ವತ್ ಮಾತು ಮಾತ್ರ ನಡೆಯುತ್ತಿದೆ. ಪ್ರಜಾಪ್ರಭುತ್ವ ತೊಂದರೆಯಲ್ಲಿದೆ.ಒಂದೊಂದಾಗಿ ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರಗಳನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ನಾವಿದಕ್ಕೆ ಅವಕಾಶ ನೀಡುವುದಿಲ್ಲ. ಅವಶ್ಯವೆನಿಸಿದರೆ ಎಲ್ಲ ತ್ಯಾಗಕ್ಕೂ ಕಾಂಗ್ರೆಸ್ ಸಿದ್ಧವಿದೆ. ಬಲಿದಾನವನ್ನು ಮಾಡಿಯಾದರೂ ಪ್ರಜಾಪ್ರಭುತ್ವವವನ್ನು ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. 
 
ಆಗಸ್ಟಾ ಹಗರಣದಿಂದ ಮುಜುಗರಕ್ಕೀಡಾಗಿರುವ ಕಾಂಗ್ರೆಸ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ವಿಷಯವನ್ನಿಟ್ಟುಕೊಂಡು ಸಂಸತ್ ಹೊರಗೆ ಮತ್ತು ಒಳಗೆ ಈ ಅಸ್ತ್ರವನ್ನು ಪ್ರದರ್ಶಿಸ ಹೊರಟಿದೆ. ಇದರ ಭಾಗವಾಗಿಯೇ ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಯನ್ನು ಕೈಗೊಂಡಿದೆ. 
 
ಈ ಪ್ರತಿಭಟನೆಯನ್ನು ಟೀಕಿಸಿರುವ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅತಿ ಹೆಚ್ಚು ರಾಜ್ಯ ಸರ್ಕಾರಗಳನ್ನು ಉರುಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದ ಕುಖ್ಯಾತಿ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments