Webdunia - Bharat's app for daily news and videos

Install App

ರಾಜ್ಯದಲ್ಲಿ ರೈತರ ಆತ್ಮಹತ್ಯೆ: ಎಸ್.ಎಂ. ಕೃಷ್ಣಾಗೆ ಸೋನಿಯಾ ಬುಲಾವ್

Webdunia
ಮಂಗಳವಾರ, 28 ಜುಲೈ 2015 (16:59 IST)
ಕರ್ನಾಟಕದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಸಮಸ್ಯೆಯನ್ನು ಹೇಗೆ ಪರಿಹರಿಸುವುದು ಎಂದು ಅಭಿಪ್ರಾಯ ಕೇಳಲು ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ದೆಹಲಿಗೆ ಕರೆಸಿಕೊಂಡು ಮಾತನಾಡಿದರು. 
 
ಜುಲೈ 23 ರಂದು ಬೆಂಗಳೂರಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ಸಮಸ್ಯೆಯನ್ನು ಹತ್ತಿಕ್ಕುವಲ್ಲಿ ಸಿದ್ದು ಸರ್ಕಾರ ವಿಫಲವಾಗಿರುವುದಕ್ಕೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.  ಸದ್ಯದಲ್ಲಿಯೇ ಅವರು ಮಂಡ್ಯ ಮತ್ತು ಉತ್ತರ ಕರ್ನಾಟಕದ ಒಂದು ಜಿಲ್ಲೆಗೆ ಭೇಟಿ ನೀಡಿ ನೊಂದ ರೈತ ಕುಟುಂಬಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. 
 
ವ್ಯಾಪಕ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕಾರಣವೇನು?, ಈ ಬಿಕ್ಕಟ್ಟಿಗೆ ರಾಜ್ಯ ಮತ್ತು ಸಚಿವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ ಮತ್ತು ಈ ಸಮಸ್ಯೆಯನ್ನು ನಿವಾರಿಸುವಲ್ಲಿ ಸರ್ಕಾರ ಮತ್ತು ಪಕ್ಷ ಯಾವ ರೀತಿಯಲ್ಲಿ ಹೊಣೆಗಾರಿಕೆಯನ್ನು ತೆಗೆದುಕೊಂಡಿದೆ ಎಂಬುದನ್ನು ಸೋನಿಯಾ ತಿಳಿಯ ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಈ ಬಿಕ್ಕಟ್ಟನ್ನು ತಡೆಯಲು ಮತ್ತು ರೈತರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಸರ್ಕಾರ ಕೈಗೊಳ್ಳಲಿರುವ ಕ್ರಮಗಳ ಕುರಿತ ವರದಿಯನ್ನು ಸಲ್ಲಿಸುವಂತೆ ಸೋನಿಯಾ ಕೃಷ್ಣಾರವರ ಬಳಿ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.
 
ಏಪ್ರಿಲ್ 1, 2015 ರಿಂದ ಇಲ್ಲಿಯವರೆಗೆ ಕರ್ನಾಟಕದಲ್ಲಿ ಸುಮಾರು 178 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಹೆಚ್ಚಿನ ರೈತರು ಸಾವಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 
ಜುಲೈ 17 ಮತ್ತು 18 ರಂದು ನೊಂದ ರೈತ ಕುಟುಂಬಗಳನ್ನು ಭೇಟಿಯಾಗಿದ್ದ  ಕೃಷ್ಣ, ಈ ಸಮಸ್ಯೆ ನಿವಾರಣೆಗೆ ತಾವು ಮುಖ್ಯಮಂತ್ರಿಯಾಗಿದ್ದ ಸಲ್ಲಿಸಲಾಗಿದ್ದ ರೈತರ ಜಿ.ಕೆ.ವೀರೇಶ್ ಸಮಿತಿಯ ವರದಿಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments