Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ
NewDelhi , ಬುಧವಾರ, 10 ಮೇ 2017 (09:31 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಾಹಾರ ಸಮಸ್ಯೆಗೆ ತುತ್ತಾಗಿರುವ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

 
ಸದ್ಯಕ್ಕೆ ಚೇತರಿಸಿಕೊಳ್ಳುತ್ತಿರುವ ಸೋನಿಯಾ ಇಂದು ಬಿಡುಗಡೆಯಾಗಬಹುದು ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಇತ್ತೀಚೆಗೆ ಆಗಾಗ ಕಾಂಗ್ರೆಸ್ ಅಧ್ಯಕ್ಷೆ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಕಳೆದ ನವಂಬರ್ ನಲ್ಲಿ ವೈರಲ್ ಜ್ವರದಿಂದಾಗಿ ಇದೇ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗಷ್ಟೇ ವಿದೇಶದಲ್ಲಿ ಆರೋಗ್ಯ ತಪಾಸಣೆಗಾಗಿ ತೆರಳಿದ್ದರು. ಇದೀಗ ಮತ್ತೆ ಅನಾರೋಗ್ಯಕ್ಕೊಳಗಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಸತ್ತ ಹೆಂಡತಿಯೊಂದಿಗೆ ಆರು ದಿನ ಒಂದೇ ರೂಂನಲ್ಲಿ ಕಳೆದ!