Publish Date: Thu, 05 Jan 2023 (09:29 IST)
Updated Date: Thu, 05 Jan 2023 (09:31 IST)
ನವದೆಹಲಿ : ಎಐಸಿಸಿ ಮಾಜಿ ಅಧ್ಯಕ್ಷರಾದ ಸೊನಿಯಾ ಗಾಂಧಿ ಅವರನ್ನು ಬುಧವಾರ ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪುತ್ರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ಬಂದಿದ್ದಾರೆ. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಪ್ರಿಯಾಂಕಾ ಹೇಳಿದ್ದಾರೆ.
ಮಂಗಳವಾರ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಭಾರತ್ ಜೋಡೋ ಯಾತ್ರೆ ಇಂದು ಬೆಳಿಗ್ಗೆ 6 ಗಂಟೆಗೆ ಪುನಾರಂಭಗೊಂಡಿದೆ. ಆದ್ರೆ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ತಡವಾಗಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.