Webdunia - Bharat's app for daily news and videos

Install App

ಉ.ಪ್ರದೇಶ್ ಚುನಾವಣೆ: ಸೋನಿಯಾ ಗಾಂಧಿಯಿಂದ ರೋಡ್‌ ಶೋ ಕಾರ್ಯಕ್ರಮ

Webdunia
ಮಂಗಳವಾರ, 2 ಆಗಸ್ಟ್ 2016 (13:16 IST)
ಮುಂದಿನ ವರ್ಷದ ಆರಂಭದಲ್ಲಿ ಉತ್ತರಪ್ರದೇಶದಲ್ಲಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದ ಅದಿನಾಯಕಿ ಸೋನಿಯಾ ಗಾಂಧಿ ಇಂದು ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
 
ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಶೀಲಾ ದೀಕ್ಷಿತ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,2017ರ ವಿಧಾನಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸೋನಿಯಾ ಗಾಂಧಿ ಇಂದು ನಡೆಯಲಿರುವ ರೋಡ್‌ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. 
 
ಉ.ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್, ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಸಲ್ಮಾನ್ ಖುರ್ಷಿದ್, ಶ್ರೀಪ್ರಕಾಶ್ ಜಸ್ವಾಲ್, ಪ್ರಮೋದ್ ತಿವಾರಿ, ರೀಟಾ ಬಹುಗುಣ್ ಜೋಷಿ, ಜಾಫರ್ ಅಲಿ, ಸಂಜಯ್ ಸಿಂಗ್, ರಾಣಾ ಗೋಸ್ವಾಮಿ, ರಾಜೇಶ್ ಮಿಶ್ರಾ, ಅಜಯ್ ರೈ, ರಾಜೇಶ್‌ಪತಿ ತ್ರಿಪಾಠಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ರೋಡ್‌ಶೋ ಕಾರ್ಯಕ್ರಮ 2 ಗಂಟೆಗೆ ಆರಂಭವಾಗಲಿದ್ದು, ನಾಯಕರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುಮಾರು ಮೂರು ಗಂಟೆಗಳಲ್ಲಿ ಎಂಟು ಕಿ.ಮೀ ದೂರವನ್ನು ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಮಾಜಿ ಕೇಂದ್ರ ಸಚಿವ ಮತ್ತು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಮ್ಲಾಪತಿ ತ್ರಿಪಾಠಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸೋನಿಯಾ ಗಾಂಧಿ ಭಾಷಣ ಮಾಡಲಿದ್ದಾರೆ. ಭಾಷಣದಲ್ಲಿ ಮೋದಿಯವರ ಸ್ವಂತ ಕ್ಷೇತ್ರವಾದ ವಾರಣಾಸಿ ಅಭಿವೃದ್ಧಿಯಲ್ಲಿ ಹಿಂದುಳಿದ ಬಗ್ಗೆ ತರಾಟೆಗೆ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments