Publish Date: Fri, 09 Mar 2018 (12:27 IST)
Updated Date: Fri, 09 Mar 2018 (12:28 IST)
ನವದೆಹಲಿ: ಎಐಸಿಸಿ ಮಾಜಿ ಅಧಿನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಬರುವ ಮೊದಲೇ ಭಾರತ ಪ್ರಗತಿ ಹೊಂದಿದೆ ಎಂದಿದ್ದಾರೆ.
ಆಗಾಗ ಕಾಂಗ್ರೆಸ್ ಆಡಳಿತದ ಬಗ್ಗೆ ಕಿಡಿ ಕಾರುವ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಸೋನಿಯಾ ಭಾರತದಲ್ಲಿ ಇತ್ತೀಚೆಗೆ ಧರ್ಮದ ಹೆಸರಿನಲ್ಲಿ ಒಡೆದು ಆಳ್ವಿಕೆ ಮಾಡುವುದು ಹೆಚ್ಚಾಗುತ್ತಿದೆ. ಭಾರತ ದೇಶ ಎಲ್ಲರಿಗೂ ಸೇರಿದ್ದು. ಯಾವುದೋ ಒಂದು ವರ್ಗಕ್ಕೆ ಸೇರಿದ್ದಲ್ಲ ಎಂದಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೋನಿಯಾ ಇದೇ ವೇಳೆ ತಮ್ಮ ಪುತ್ರಿ ಪ್ರಿಯಾಂಕಾ ವಾದ್ರಾ ಬಗ್ಗೆಯೂ ಹೇಳಿಕೊಂಡಿದ್ದಾರೆ. ಪ್ರಿಯಾಂಕಾ ಯಾವಾಗ ಬೇಕಾದರೂ ರಾಜಕೀಯಕ್ಕೆ ಬರಬಹುದು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ