Publish Date: Sun, 12 Jun 2022 (14:52 IST)
Updated Date: Sun, 12 Jun 2022 (16:55 IST)
ನವದೆಹಲಿ : ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಟ್ವೀಟ್ ಮಾಡಿದ್ದು, ಸೋನಿಯಾ ಗಾಂಧಿ ಅವರು ಇಂದು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ.
ವೈದ್ಯರು ನಿಗಾ ವಹಿಸಿದ್ದಾರೆ. ಸೋನಿಯಾ ಅವರ ಬಗ್ಗೆ ಕಾಳಜಿ ಮತ್ತು ಗುಣಮುಖರಾಗಲಿ ಎಂದು ಹಾರೈಸಿದ ನಮ್ಮ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಎಲ್ಲ ಹಿತೈಷಿಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇಡಿ) ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.
ಈ ಹಿನ್ನೆಲೆ ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷರಿಗೆ ಹೊಸ ಸಮನ್ಸ್ ನೀಡಿದ್ದೇವೆ ಎಂದು ಇಡಿ ತಿಳಿಸಿತ್ತು.