ನವದೆಹಲಿ: ಕಾಂಗ್ರೆಸ್'ನ ಅಧಿ ನಾಯಕಿ ಸೋನಿಯಾ ಗಾಂಧಿ 2017ರಲ್ಲಿ ನಡೆಯಲಿರುವ ಪಂಜಾಬ್ ಮತ್ತು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಂತರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿದೆ.
ಎರಡು ವರ್ಷದ ಹಿಂದೆಯೇ ಸೋನಿಯಾ ಗಾಂಧಿ ಪುತ್ರವರಾಹುಲ್ ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಎಲ್ಕ ಸಿದ್ಧತೆಗಳು ನಡೆದಿದ್ದವು. ಆದರೆ, ಬದಲಾದ ರಾಜಕೀಯದ ಕಾಲಘಟ್ಟದಲ್ಲಿ ಅದು ಅಸಾಧ್ಯವಾಗಿತ್ತು. ಆದರೆ, ಇತ್ತೀಚೆಗೆ ಸೋನಿಯಾ ಅವರಿಗೆ ಆರೋಗ್ಯ ಹದಗೆಡುತ್ತಿದ್ದು ಪಕ್ಷ ಸಂಘಟನೆಯಲ್ಲಿ ಕೇಂದ್ರೀಕರಿಸಲು ಆಗುತ್ತಿಲ್ಲ ಎನ್ನಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಪ್ತ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.
ಆರೋಗ್ಯ ಕೈಕೊಡುತ್ತಿರುವುದರಿಂದ ಆದಷ್ಟು ಬೇಗ ಪಕ್ಷದ ಜವಾಬ್ದಾರಿಯುತ ಸ್ಥಾನದಿಂದ ಹೊರಬರಲು ಸೋನಿಯಾ ಅವರು ನಿರ್ಧರಿಸಿದ್ದಾರೆ. ಪಂಜಾಬ್ ಮತ್ತು ಉತ್ತರ ಪ್ರದೇಶದ ಚುನಾವಣೆ ನಡೆಯುವವರೆಗೆ ಅಧ್ಯಕ್ಷ ಸ್ಥಾನದಲ್ಲಿರುವಂತೆ ಪಕ್ಷದ ಸದಸ್ಯರು ಒತ್ತಾಯಿಸಿದ್ದಾರೆ ಅವರನ್ನು ಒತ್ತಾಯಿಸಿದ್ದಾರೆ ಎಂದು ಆಂಗ್ಲ ದೈನಿಕವೊಂದು ವರದಿ ಮಾಡಿದೆ.
ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಪಂಜಾಬ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಅದರ ಜೊತೆಗೆ ಫೆಬ್ರವರಿ 1ರಂದು 2017ರಂದು ಬಜೆಟ್ ಕೂಡಾ ಮಂಡನೆಯಾಗಲಿದೆ. ಹೀಗಿದ್ದಾಗ ಒಮ್ಮಿಂದೊಮ್ಮೆಲೆ ಸೋನಿಯಾ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಇನ್ನಷ್ಟು ಪೆಟ್ಟು ತಿನ್ನಬಹುದು ಎಂದು, ಚುನಾವಣೆಗೆ ಮುನ್ನ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇಲ್ಲ ಎನ್ನುವುದು ಕಾಂಗ್ರೆಸ್ ಮೂಲ ಹೇಳುತ್ತದೆ. ಆದರೆ, ಅದಕ್ಕೆ ಬೇಕಿರುವ ಎಲ್ಲ ಅಗತ್ಯ ಸಿದ್ಧತೆಗಳು ನಿಧಾನವಾಗಿ ನಡೆಯುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ