Select Your Language

Notifications

webdunia
webdunia
webdunia
webdunia

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿತ್ತರೂ ಬರಲ್ಲ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ

sonia gandhi, mallikarjun kharge and adhir chaudhary
ನವದೆಹಲಿ , ಗುರುವಾರ, 21 ಡಿಸೆಂಬರ್ 2023 (10:28 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಂದಿರ ಉದ್ಘಾಟನಾ ಕಾರ್ಯಕ್ರಮದ ಐತಿಹಾಸಿಕ ಕ್ಷಣಕ್ಕೆಕ್ಕೆ ಸಾಕ್ಷಿಯಾಗಲು ಅನೇಕ ಗಣ್ಯಾತಿಗಣ್ಯರನ್ನು ರಾಮಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ.

ಈ ಗಣ್ಯರ ಪಟ್ಟಿಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಕೂಡಾ ಸೇರಿದ್ದಾರೆ. ವಿಪಕ್ಷದ ಘಟಾನುಘಟಿ ನಾಯಕರಿಗೂ ಆಹ್ವಾನ ನೀಡಲಾಗಿದೆ.

ಆದರೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಕಾರ್ಯಕ್ರಮಕ್ಕೆ ಹಾಜರಾಗದೇ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್..ಡಿ ದೇವೇಗೌಡರೂ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಒಂದು ಧರ್ಮಕ್ಕೆ ಸೀಮಿತವಾದ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಳ್ಳಲು ಖರ್ಗೆ, ಸೋನಿಯಾ ನಿರ್ಧರಿಸಿರಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಏನ್ ಮಾಡಿದ್ಳು ಗೊತ್ತಾ?