ಇಂದು ತಿಹಾರ್ ಜೈಲಿನಲ್ಲಿ ಡಿಕೆ ಶಿವಕುಮಾರ್ ರನ್ನು ಭೇಟಿ ಮಾಡಲಿದ್ದಾರೆ ಸೋನಿಯಾ ಗಾಂಧಿ

ಸೋಮವಾರ, 21 ಅಕ್ಟೋಬರ್ 2019 (09:02 IST)
ನವದೆಹಲಿ : ಅಕ್ರಮ ಹಣ ಪತ್ತೆ ಪ್ರಕರಣದಡಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ಭೇಟಿಗೆ ಅನುಮತಿ ನೀಡುವಂತೆ ಸೋನಿಯಾ ಗಾಂಧಿ ತಿಹಾರ್ ಜೈಲು ಅಧಿಕಾರಿಗಳಿಗೆ ಪತ್ರ ಬರೆದ ಹಿನ್ನಲೆಯಲ್ಲಿ ಇಂದು ಅಧಿಕಾರಿಗಳು ಡಿಕೆಶಿಯವರನ್ನು ಭೇಟಿಯಾಗಲು ಸೋನಿಯಾ ಗಾಂಧಿಗೆ ಅನುಮತಿ ನೀಡಿದ್ದಾರೆ ಎನ್ನಲಾಗಿದೆ. ಆದ ಕಾರಣ ಇಂದು ಡಿಕೆಶಿ ಸಹೋದರ ಡಿಕೆ ಸುರೇಶ್ ಅವರೊಂದಿಗೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿ ಡಿಕೆಶಿಯವರನ್ನು ಭೇಟಿಯಾಗಿ ಧೈರ್ಯ ಹೇಳಲಿದ್ದಾರೆ.


ಈ ಹಿಂದೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿದ ವೇಳೆ ಒಬ್ಬರ ಭೇಟಿಗೆ ಮಾತ್ರ ಅನುಮತಿ ನೀಡಿದ ಹಿನ್ನಲೆಯಲ್ಲಿ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರನ್ನು ಮಾತ್ರ ಭೇಟಿಯಗಿದ್ದು, ಡಿಕೆಶಿಯವರ ಭೇಟಿ ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದು ನಡೆಯಲಿದೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆ