Select Your Language

Notifications

webdunia
webdunia
webdunia
webdunia

ಸೋನಿಯಾ-ರಾಹುಲ್-ಪ್ರಿಯಾಂಕಾ ಒಗ್ಗಟ್ಟಿನಿಂದ ಕಾಂಗ್ರೆಸ್‌‍ಗೆ ಬಲ: ದಿಗ್ವಿಜಯ್ ಸಿಂಗ್

ಸೋನಿಯಾ-ರಾಹುಲ್-ಪ್ರಿಯಾಂಕಾ ಒಗ್ಗಟ್ಟಿನಿಂದ ಕಾಂಗ್ರೆಸ್‌‍ಗೆ ಬಲ: ದಿಗ್ವಿಜಯ್ ಸಿಂಗ್
ಹೈದ್ರಾಬಾದ್ , ಸೋಮವಾರ, 11 ಜುಲೈ 2016 (13:11 IST)
ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಮುಖ್ಯಪಾತ್ರ ನಿಭಾಯಿಸಲಿದ್ದಾರೆ ಎನ್ನುವ ವರದಿಗಳ ಮಧ್ಯೆ, ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಒಗ್ಗಟ್ಟು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
  
ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಪ್ರಚಾರ ಮಾಡಲಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಿಯಾಂಕಾ ರಾಯಬರೇಲಿ ಮತ್ತು ಅಮೇಥಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಆದರೆ, ಒಂದು ವೇಳೆ, ಅವರು ಉತ್ತರಪ್ರದೇಶದಾದ್ಯಂತ ಅಥವಾ ದೇಶಾದ್ಯಂತ ಪ್ರಚಾರ ಮಾಡಿದಲ್ಲಿ ಕಾಂಗ್ರೆಸ್ ನಾಯಕರಿಗೆ ಸಂತೋಷವಾಗುತ್ತದೆ ಎಂದು ತಿಳಿಸಿದ್ದಾರೆ.  
 
ಪ್ರಿಯಾಂಕಾ ಪ್ರಚಾರದ ಹೊಣೆ ಹೊರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಬಲ ಬರಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ  ಒಗ್ಗಟ್ಟಿನ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಖಂಡಿತವಾಗಿಯೂ ಬಲ ಬರಲಿದೆ ಎಂದು ತಿಳಿಸಿದ್ದಾರೆ.
   
ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿಸುವಲ್ಲಿ ವಿಳಂಬವಾಗುತ್ತಿರುವ  ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಯಾವಾಗ ಅಧ್ಯಕ್ಷರಾಗಬೇಕು ಎನ್ನುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮೀರ ಹಿಂಸಾಚಾರ: ಸಾವಿನ ಸಂಖ್ಯೆ 23ಕ್ಕೆ ಏರಿಕೆ