ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಸೋನಿಯಾ ಗಾಂಧಿಯವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ಅಡಳಿತ ಮಂಡಳಿ ಯಾವುದೇ ಪ್ರಕಟಣೆ ಹೊರಡಿಸಿಲ್ಲವಾದರೂ, ಸೋನಿಯಾ ಆರೋಗ್ಯವಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ತಿಳಿಸಿದ್ದಾರೆ.
ವಾರಣಾಸಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಸೋನಿಯಾ, ನಂತರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಿನ್ನೆ ರಾತ್ರಿ ನವದೆಹಲಿಗೆ ಆಗಮಿಸಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ವಾರಣಾಸಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ 8 ಕಿ.ಮೀ ರೋಡ್‌ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಆರೋಗ್ಯ ಸಮಸ್ಯೆ ಎದುರಾಗಿತ್ತು. ನಂತರ ರೋಡ್‌ಶೋ ಕಾರ್ಯಕ್ರಮವನ್ನು ಅರ್ಧದಲ್ಲಿಯೇ ಕೈ ಬಿಟ್ಟು ಚಾರ್ಟರ್ಡ್ ವಿಮಾನದ ಮೂಲಕ ದೆಹಲಿಗೆ ವಾಪಸಾಗಿದ್ದರು.
ಕಾಶಿ ವಿಶ್ವನಾಥ್ ದೇವಾಲಯದ ದರ್ಶನಕ್ಕೆ ತೆರಳಲು ಬಯಸಿದ್ದ ಸೋನಿಯಾ ಗಾಂಧಿ, ಅನಾರೋಗ್ಯದಿಂದಾಗಿ ದೇವಾಲಯಕ್ಕೆ ತೆರಳಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ವಾರಣಾಸಿಗೆ ಬಂದು ಕಾಶಿ ವಿಶ್ವನಾಥನ ದರ್ಶನ ಮಾಡುವುದಾಗಿ ಸೋನಿಯಾ ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.