Webdunia - Bharat's app for daily news and videos

Install App

ರಾಹುಲ್‌ಗಾಂಧಿ ಪಟ್ಟಾಭಿಷೇಕಕ್ಕೆ ಸೋನಿಯಾ ಗಾಂಧಿ ಸೂಚನೆ

Webdunia
ಬುಧವಾರ, 1 ಜೂನ್ 2016 (14:18 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ರಾಷ್ಟ್ರಾಧ್ಯಕ್ಷರಾಗಿ ಬಡ್ತಿ ನೀಡಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಂಬರುವ ಕೆಲ ವಾರಗಳಲ್ಲಿ ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಗಳಿವೆ.ಅಧಿಕಾರ ಹಸ್ತಾಂತರಕ್ಕೆ ಇದು ಸೂಕ್ತ ಸಮಯವಾಗಿದೆ ಎಂದು ಸೋನಿಯಾ ಹೇಳಿರುವುದಾಗಿ ಎಐಸಿಸಿ ಮೂಲಗಳು ತಿಳಿಸಿವೆ. 
 
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ರಾಹುಲ್ ಗಾಂಧಿಯವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಹಲವಾರು ಬಾರಿ ಪಕ್ಷದ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದರು. ಇದೀಗ ರಾಹುಲ್‌ಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.
 
ಪಕ್ಷದ ಹೈಕಮಾಂಡ್‌ನಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಸೋನಿಯಾ ಮತ್ತು ರಾಹುಲ್‌ ಕಾರ್ಯನಿರ್ವಹಿಸುತ್ತಿರುವುದರಿಂದ ಎರಡು ಅಧಿಕಾರ ಕೇಂದ್ರಗಳಾಗಿವೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು.
 
ಇದೀಗ ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿ ತೆರೆಮರೆಯಿಂದ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ಸೋನಿಯಾ ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಎಂದು ಹೆಸರಿಟ್ಟ ನಿತಿನ್ ಗಡ್ಕರಿ

ಆಹ್ವಾನ ಪತ್ರ ನೀಡಿದ್ದನ್ನು ಪೋಸ್ಟ್ ಹಂಚಿ, ಮುಖ್ಯಮಂತ್ರಿಗಳೇ ಸುಳ್ಳು ಹೇಳೋದು ಬಿಡಿ ಎಂದ ಬಿಜೆಪಿ

ಸಿಗಂದೂರು ಸೇತುವೆ ಉದ್ಘಾಟನೆಗೆ ಆಹ್ವಾನ ಸಿಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೆಟ್ಟಿಗರ ಪ್ರಶ್ನೆ

ಸಿಎಂ ಕುರ್ಚಿ ವಿಚಾರ ಬಿಜೆಪಿಗೆ ಸಂಬಂಧಿಸಿದ್ದಲ್ಲ: ಸಂತೋಷ ಲಾಡ್‌

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ

ಮುಂದಿನ ಸುದ್ದಿ
Show comments