Publish Date: Tue, 14 Jun 2022 (13:37 IST)
Updated Date: Tue, 14 Jun 2022 (17:40 IST)
ನವದೆಹಲಿ : ಭಾರತದಲ್ಲಿ ಮುಂದಿನ ಸಿಡಿಎಸ್ ನೇಮಕದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊನೆಗೂ ಮೌನ ಮುರಿದಿದ್ದಾರೆ.
ಶೀಘ್ರವೇ ಸೇನಾ ಪಡೆಗಳ ಮುಖ್ಯಸ್ಥರನ್ನು ನೇಮಕ ಮಾಡುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನೂತನ ʼಅಗ್ನಿಪಥ್ʼ ನೇಮಕಾತಿ ಯೋಜನೆ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರವೇ ಸಿಡಿಎಸ್ ನೇಮಕ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಹೇಳಿದ್ದಾರೆ.
2021ರ ಡಿಸೆಂಬರ್ನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತದ ಮೊದಲ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹುತಾತ್ಮರಾಗಿದ್ದರು. ಆ ಬಳಿಕ ಸಿಡಿಎಸ್ ಹುದ್ದೆ ತೆರವಾಗಿದೆ.