Webdunia - Bharat's app for daily news and videos

Install App

ಮುಖ್ಯಮಂತ್ರಿಯನ್ನೇ ಪಕ್ಷದಿಂದ ಉಚ್ಚಾಟಿಸಿದ ಮುಲಾಯಂ

Webdunia
ಶನಿವಾರ, 31 ಡಿಸೆಂಬರ್ 2016 (10:45 IST)
ವಿಧಾನಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡಿರುವ ಉತ್ತರಪ್ರದೇಶದಲ್ಲಿ ನಡೆದಿರುವ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಪುತ್ರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. 
 
ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಮುಲಾಯಂ ಸಿಂಗ್ ಯಾದವ್ ಅಖಿಲೇಶ್ ಮತ್ತು ತಮ್ಮ ಸೋದರ ಸಂಬಂಧಿ ರಾಮ್ ಗೋಪಾಲ್ ಅವರನ್ನು ಸಹ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.  ಭಾರತದ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿಯೊಬ್ಬರನ್ನು ಉಚ್ಚಾಟಿಸಿರುವುದು ಇದೇ ಮೊದಲು. 
 
ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕೆ ಅವರಿಬ್ಬರನ್ನು ಉಚ್ಚಾಟಿಸಲಾಗಿದೆ. ಅಖಿಲೇಶ್ ಅವರನ್ನು ಮುಖ್ಯಮಂತ್ರಿ ಮಾಡಿದ್ದು ನಾನು. ನನ್ನನ್ನು ಕೇಳದೆಯೇ ನಿರ್ಧಾರ ತೆಗೆದುಕೊಳ್ಳುವುದನ್ನು ಸಹಿಸಲಾಗುವುದಿಲ್ಲ. ಪಕ್ಷದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸಿದ್ದರೂ ಮತ್ತೊಂದು ಪಟ್ಟಿ ಹೊರಡಿಸುವ ಮೂಲಕ ಅಖಿಲೇಶ್ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಮುಲಾಯಂ ಕಿಡಿಕಾರಿದ್ದಾರೆ. 
 
ಉಚ್ಚಾಟಿತರಾಗಿರುವ ಅಖಿಲೇಶ್ ಅವರಿಗೆ ಪಕ್ಷದ ಹೊರಗಿಂದ ಮತ್ತು ಒಳಗಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಅವರನ್ನು ಪಕ್ಷಕ್ಕೆ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲು ಬಿಎಸ್‌ವೈ, ಸಿದ್ದರಾಮಯ್ಯ ಜತೆ ಅಡ್ಜಸ್ಟ್‌ಮೆಂಟ್: ಬಸನಗೌಡ ಯತ್ನಾಳ್ ಹೊಸ ಬಾಂಬ್

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಸಂಜೆ ಹುಷಾರು

ಮಾತೆತ್ತಿದರೆ ದ್ರೌಪದಿ ಮುರ್ಮು ಹೆಸರು ಹೇಳುವ ಬಿಜೆಪಿ ಪ್ರಧಾನಿಯನ್ನಾಗಿ ಯಾಕೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಸತತ 8 ನೇ ಭಾರೀ ಸ್ಚಚ್ಚ ನಗರ ಹೆಗ್ಗಳಿಕೆಗೆ ಪಾತ್ರವಾದ ಇಂದೋರ್‌, ಮೂರನೇ ಸ್ಥಾನದಲ್ಲಿ ಮೈಸೂರು

ಮೆಟ್ರೊ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್‌: ಮೆಟ್ರೊ ಮಾರ್ಗಗಳಲ್ಲಿ ಸಿಗಲಿದೆ ವೈಫೈ

ಮುಂದಿನ ಸುದ್ದಿ
Show comments