Select Your Language

Notifications

webdunia
webdunia
webdunia
webdunia

ಬಾಹ್ಯಾಕಾಶ ವಿಜ್ಞಾನಿ ಪ್ರೊ.ಯು.ಆರ್. ರಾವ್ ವಿಧಿವಶ

ಬಾಹ್ಯಾಕಾಶ ವಿಜ್ಞಾನಿ ಪ್ರೊ.ಯು.ಆರ್. ರಾವ್ ವಿಧಿವಶ
ಬೆಂಗಳೂರು , ಸೋಮವಾರ, 24 ಜುಲೈ 2017 (09:30 IST)
ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಯು.ಆರ್. ರಾವ್  ವಿಧಿವಶರಾಗಿದ್ದಾರೆ. ಇಂದಿರಾನಗರದ ನಿವಾಸದಲ್ಲಿ ರಾತ್ರಿ 2.55ರ ಸುಮಾರಿಗೆ ರಾವ್ ಕೊನೆಯುಸಿರೆಳೆದಿದ್ದಾರೆ.

ಭಾರತದ ಮೊದಲ ಉಪಗ್ರಹ ಆರ್ಯಭಟ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದವರು ಯು.ಆರ್. ರಾವ್. ಬಾಹ್ಯಾಕಾಶ ಸಂಶೋಧನೆಯಲ್ಲಿ ಪರಿಣಿತರಾಗಿದ್ದರಾವ್ 1984-1994ರವರೆಗೆ ಇಸ್ರೋ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು.

ಮಂಗಳಯಾನ-1 ಮತ್ತು ಚಂದ್ರಯಾನ ಮಾಡಬೇಕೆಂಬ ಚಿಂತನೆ ಹಿಂದಿನ ಮಾಸ್ಟರ್ ಮೈಂಡ್ ಪ್ರೋ. ಯು.ಆರ್. ರಾವ್. ಬಾಹ್ಯಾಕಾಶ ಕ್ಷೇತ್ರದ ಸಾಧನೆಗಾಗಿ 2017ರಲ್ಲಿ ಪದ್ಮವಿಭೂಷಣ ಸೇರಿದಂತೆ ಹತ್ತು ಹಲವು ಪ್ರಶಸ್ತಿ ಗೌರವ ಸಿಕ್ಕಿದೆ.

2013ರಲ್ಲಿ ವಾಷಿಂಗ್ಟನ್ ಡಿಸಿಯ `ಸ್ಯಾಟಲೈಟ್ ಹಾಲ್ ಆಫ್ ಫೇಮ್’ ಮತ್ತು ಮೆಕ್ಸಿಕೋದ `ಐಎಎಫ್ ಹಾಲ್ ಆಫ್ ಫೇಮ್’ನಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ ವಿಜ್ಞಾನಿ ಎಂಬ ಖ್ಯಾತಿಗೆ ಪಾತ್ರರಾಗಿದ್ದರು.  ಸದ್ಯ, ಅಹಮದಾಬಾದ್`ನ ಫಿಸಿಕಲ್ ರಿಸರ್ಚ್ ಲ್ಯಾಬರೇಟರಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಮತ್ತು ತಿರುವನಂತಪುರದ ಇಂಡಿಯನ್ ಇನ್ಸ್`ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಚಾನ್ಸಲರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾವ್ ತಮ್ಮ 85ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.

ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಪ್ರೊಫೆಸರ್ ಯು.ಆರ್. ರಾವ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 3 ಗಂಟೆಗೆ  ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹೆಂಡತಿಗಾಗಿ ಶೌಚಾಲಯ ಕಟ್ಟಲು ಸಾಧ್ಯವಿಲ್ಲ ಎಂದರೆ ಹೆಂಡತಿಯನ್ನೇ ಮಾರಿ ಬಿಡಿ ಎಂದ ಜಡ್ಜ್ ಸಾಹೇಬ್ರು