Publish Date: Sun, 21 Mar 2021 (16:22 IST)
Updated Date: Sun, 21 Mar 2021 (16:24 IST)
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೀಗ ಅವರು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಶುಕ್ರವಾರ ಅವರು ಕೊರೋನಾ ಸೋಂಕಿಗೊಳಗಾಗಿದ್ದು, ಶನಿವಾರ ಅಂದರೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಶೇಷವೆಂದರೆ ಇದೀಗ ನಡೆಯುತ್ತಿರುವ ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಭಾಗಿಯಾಗಿದ್ದರು. ಶುಕ್ರವಾರವೂ ಅವರು ಅಧಿವೇಶನದಲ್ಲಿ ಭಾಗಿಯಾಗಿದ್ದರು. ಇದಾದ ಬಳಿಕ ಪರೀಕ್ಷೆಗೊಳಗಾಗಿದ್ದ ಅವರಿಗೆ ಸೋಂಕು ದೃಢಪಟ್ಟಿತ್ತು.