Publish Date: Tue, 10 May 2022 (16:00 IST)
Updated Date: Tue, 10 May 2022 (16:02 IST)
ಮೇ ಮೂರನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಪೂರ್ಣಗೊಂಡಿದ್ದು, ಅಂತಿಮ ಹಂತದ ಸಿದ್ಧತೆ ನಡೆದಿದೆ ಎಂದರು.
ಮೇ ಮೂರನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ನಿರ್ದಿಷ್ಟ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಅವರು ಹೇಳಿದರು.