Publish Date: Sun, 09 Oct 2022 (14:56 IST)
Updated Date: Sun, 09 Oct 2022 (15:01 IST)
ಚೆನ್ನೈ : ಚೆನ್ನೈನಲ್ಲಿ ನಡೆದ ಡಿಎಂಕೆ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಇಂದು ಡಿಎಂಕೆ ಮುಖಂಡ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಹೊಸದಾಗಿ ರಚನೆಯಾದ ಜನರಲ್ ಕೌನ್ಸಿಲ್ನಲ್ಲಿ, ಪಕ್ಷದ ಉನ್ನತ ಹುದ್ದೆಗೆ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಡಿಎಂಕೆ ಘೋಷಣೆ ಮಾಡಿದೆ.
ಪ್ರಧಾನ ಕಾರ್ಯದರ್ಶಿ ಪಕ್ಷದ ಹಿರಿಯ ನಾಯಕರಾದ ದುರೈಮುರುಗನ್ ಮತ್ತು ಖಜಾಂಚಿಯಾಗಿ ಟಿ.ಆರ್. ಬಾಲು ಅವಿರೋಧವಾಗಿ ಆಯ್ಕೆಯಾದರು. ಈ ಮೂವರು ನಾಯಕರು ಕೂಡ ಎರಡನೇ ಬಾರಿಗೆ ತಮ್ಮ ತಮ್ಮ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ.