Select Your Language

Notifications

webdunia
webdunia
webdunia
webdunia

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

Stampede

Sampriya

ಭುವನೇಶ್ವರ , ಭಾನುವಾರ, 29 ಜೂನ್ 2025 (10:26 IST)
Photo Credit X
ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಬಳಿ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದಾರೆ. 

ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿಎಂದು ಗುರುತಿಸಲಾಗಿದೆ. ಮೂವರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಜಗನ್ನಾಥ, ಬಲಭದ್ರ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಯಾತ್ರೆ ಪ್ರಾರಂಭವಾಗಿವೆ. ಜಗನ್ನಾಥ ದೇವಸ್ಥಾನದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವಗುಂಡಿಚಾ ದೇವಸ್ಥಾನದ ಬಳಿ ಇದ್ದಾಗ ಈ ಘಟನೆ ಸಂಭವಿಸಿದೆ.

ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಪವಿತ್ರ ರಥಗಳು ಗುಂಡಿಚಾ ದೇವಸ್ಥಾನದಲ್ಲಿ ಇದ್ದವು ಮತ್ತು ದರ್ಶನಕ್ಕಾಗಿ ದೊಡ್ಡ ಜನಸಮೂಹ ಜಮಾಯಿಸಿತ್ತು. ಜನಸಂದಣಿ ಹೆಚ್ಚಾಗುತ್ತಿದ್ದಂತೆ, ಕೆಲವರು ಬಿದ್ದು ಕಾಲ್ತುಳಿತ ಪ್ರಾರಂಭವಾಯಿತು.  

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ