ಸಾಂವಿಧಾನಿಕ ಹಕ್ಕುಗಳನ್ನು ಒದಗಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯದ ಬೇಡ ಜಂಗಮರಿಗೆ ರಾಜ್ಯ ಸರ್ಕಾರ ನಾಲ್ಕು ವರ್ಷದ ಹಿಂದೆ ನೀಡಿದ್ದ ಆದೇಶವನ್ನೇ ಪುನಃ ನೀಡಿರುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.
ಐದು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದ ಬೇಡ ಜಂಗಮರು ರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ನಡೆದು ಕೊಳ್ಳುತ್ತದೆ ಎಂದು ನಂಬಿದ್ದರು. ಭರವಸೆ ಹುಸಿಯಾದ ಹಿನ್ನೆಲೆ ಹೋರಾಟದ ಮುಂದಿನ ನಡೆ ಕುರಿತು ತೀರ್ಮಾನಿಸಲು ಸಭೆ ಕರೆದಿದ್ದಾರೆ.