Select Your Language

Notifications

webdunia
webdunia
webdunia
webdunia

ರಾಜ್ಯ ನಿರ್ಮಾಣ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಬೊಮ್ಮಾಯಿ

ರಾಜ್ಯ ನಿರ್ಮಾಣ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಬೊಮ್ಮಾಯಿ
ನವದೆಹಲಿ , ಶುಕ್ರವಾರ, 24 ಜೂನ್ 2022 (12:38 IST)
ನವದೆಹಲಿ : ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಉಮೇಶ್ ಕತ್ತಿ ಹೀಗೆ ಹಲವು ಬಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರದ ಮುಂದೆ ಆ ರೀತಿಯಾದ ಯಾವುದೇ ಪ್ರಸ್ತಾಪಗಳಿಲ್ಲ ಎಂದು ತಿಳಿಸಿದ್ದಾರೆ. 

ದೆಹಲಿ ಭೇಟಿ ಕುರಿತು ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗೆ ಸೂಚಕರಾಗಿ ಸಹಿ ಮಾಡಲು ಆಗಮಿಸಿದ್ದೆ.

ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ. ಕೇಂದ್ರ ಸಚಿವರನ್ನೂ ಭೇಟಿ ಮಾಡಲ್ಲ. ನಾಮಪತ್ರ ಸಲ್ಲಿಕೆ ವಿಚಾರವೇ ಹೊರತು ಇನ್ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತಂಗಿಯನ್ನ ಚುಡಾಯಿಸಿದ್ದಕ್ಕೆ ಅಣ್ಣಂದಿರು ಏನ್ ಮಾಡುದ್ರು ಗೊತ್ತ ?