Select Your Language

Notifications

webdunia
webdunia
webdunia
Friday, 21 March 2025
webdunia

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ
ತಿರುವನಂತಪುರಂ , ಮಂಗಳವಾರ, 2 ಮೇ 2023 (09:02 IST)
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು.
ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್ನ ವಿಂಡ್ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದ್ದರು. ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

2 ತಿಂಗಳಲ್ಲಿ ಮೂರನೇ ಬ್ಯಾಂಕ್ ದಿವಾಳಿ..!