Select Your Language

Notifications

webdunia
webdunia
webdunia
webdunia

ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ: ಮೋದಿ

ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ: ಮೋದಿ
ನವದೆಹಲಿ , ಬುಧವಾರ, 2 ಫೆಬ್ರವರಿ 2022 (15:17 IST)
ನವದೆಹಲಿ : ಬಿಜೆಪಿ ರೈತರ ಪರವಾದ ಪಕ್ಷವಾಗಿದ್ದು, ಆತ್ಮನಿರ್ಭರ ಭಾರತ ಹಾಗೂ ಬಜೆಟ್ನಿಂದಾಗಿ ದೇಶದ ಅಭಿವೃದ್ಧಿ ಇನ್ನಷ್ಟು ವೇಗ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

 
ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಪ್ರಪಂಚ ಭಾರತವನ್ನು ನೋಡುವ ದೃಷ್ಟಿಕೋನವು ಬಹಳಷ್ಟು ಬದಲಾಗಿದೆ. ಈಗ ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ ಎಂದು ಹೇಳಿದರು.

 
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಅನ್ನು ಅದರ ವಿಶಾಲತೆಯನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ವಿವರಿಸಿದ್ದರು. ನಾನು ಇಂದು ಬಜೆಟ್ನ ಪ್ರಮುಖ ಅಂಶಗಳತ್ತ ಗಮನ ಹರಿಸಲು ಪ್ರಯತ್ನಿಸುತ್ತೇನೆ ಎಂದ ಅವರು, ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಮೂಲಕ ದೇಶವನ್ನು ತ್ವರಿತಗತಿಯಲ್ಲಿ ಮುನ್ನಡೆಸುವುದು ನಮಗೆ ಅನಿವಾರ್ಯವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ