ಭವಾನಿಪುರದಲ್ಲಿ ಬಿಗಿ ಭದ್ರತೆಯಲ್ಲಿ ಬಿರುಸಿನ ಮತದಾನ

Webdunia
ಗುರುವಾರ, 30 ಸೆಪ್ಟಂಬರ್ 2021 (14:40 IST)
ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ.

ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ ಹೆಸರುವಾಸಿಯಾದ ಬಂಗಾಳದಲ್ಲಿ ಸುಗಮವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗ ಬಿಗಿ ಕ್ರಮ ಕೈಗೊಂಡಿದೆ.
ಈ ಹಿಂದೆ ಎರಡು ಬಾರಿ ಮಮತಾ ಅವರನ್ನು ಈ ಕ್ಷೇತ್ರದ ಜನ ಆಯ್ಕೆ ಮಾಡಿದ್ದರು. ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಮಮತಾ ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಪಕ್ಷ ಟಿಎಂಸಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದ ಮಮತಾ ಅವರಿಗೆ ಸ್ಥಾನ ಉಳಿಸಿಕೊಳ್ಳಲು ಈ ಉಪಚುನಾವಣೆ ಗೆಲುವು ಅನಿವಾರ್ಯವಾಗಿದೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಸಿಪಿಎಂನ ಶ್ರೀಜಿಬ್ ಬಿಸ್ವಾಸ್ ತೀವ್ರ ಸ್ಪರ್ಧೆಯೊಡ್ಡಿದ್ದಾರೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಝೆಯವರೆಗೂ ನಡೆಯಲಿದೆ. ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಮಮತಾ ಹೋರಾಡುತ್ತಿದ್ದಾರೆ,
ದಕ್ಷಿಣ ಕೊಲ್ಕತ್ತಾದ ಭವಾನಿಪುರ್ ಮತ್ತು ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್ಗಂಜ್ ಕ್ಷೇತ್ರಗಳಲ್ಲಿಯೂ ಉಪಚುನಾವಣೆಗೆ ಮತದಾನ ನಡೆಯುತ್ತಿದೆ. ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments