ಚೆನ್ನೈ: ಅಣ್ಣಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು 6 ಬಾರಿ ಚಾಟಿ ಏಟು ಹೊಡೆದುಕೊಂಡು ಪ್ರತಿಭಟಿಸಿದರು.
ಅಣ್ಣಾಮಲೈ ಕೊಯಮತ್ತೂರಿನಲ್ಲಿರುವ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸಿದರು. ಅವರು ಚಾಟಿ ಬೀಸುತ್ತಿದ್ದಂತೆಯೇ ಅವರ ಮನೆ ಮುಂದೆ ಜಮಾಯಿಸಿದ ಪಕ್ಷದ ಕಾರ್ಯಕರ್ತರು 'ವೆಟ್ರಿವೇಲ್, ವೀರವೆಲ್' ಎಂದು ಘೋಷಣೆ ಕೂಗಿದರು.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಎಂಕೆ ಸರ್ಕಾರದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹಾಲಾಗಿದ್ದು, ಈ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಚಪ್ಪಲಿ ಧರಿಸಲ್ಲ ಎಂದು ಶಪಥ ಮಾಡಿದರು.
ಇದಕ್ಕೂ ಮುನ್ನ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೇಲಿನ ಹಲ್ಲೆ ಖಂಡಿಸಿ ಚಾಟಿ ಬೀಸುವುದಾಗಿ ಘೋಷಿಸಿದರು.