ಪಾಟ್ನಾ : ಶಾಲೆಯಲ್ಲಿ ಮಧ್ಯಾಹ್ನದ ಊಟದ ಯೋಜನೆ ಅನುಷ್ಠಾನದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಗಲಾಟೆ ಮಾಡಿ ಶಾಲೆಯ ಆಸ್ತಿಯನ್ನು ಧ್ವಂಸಗೊಳಿಸಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.
ವರದಿಗಳ ಪ್ರಕಾರ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಮಧ್ಯಾಹ್ನದ ಊಟ ನೀಡುತ್ತಿಲ್ಲ, ತಮ್ಮ ಶಿಕ್ಷಕರು ಪಾಠ ಕಲಿಸುವ ಬದಲು ಮಸಾಜ್ ಮಾಡುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.
ಘಟನೆ ಕತಿಹಾರ್ ಬರ್ಸೋಯ್ ಬ್ಲಾಕ್ನ ಅಬಾದ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬರಿಯೌಲ್ ಮಿಡಲ್ ಸ್ಕೂಲ್ನಲ್ಲಿ ವರದಿಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಆಸ್ತಿಯನ್ನು ಧ್ವಂಸಗೊಳಿಸುತ್ತಿರುವುದು ಕಂಡುಬಂದಿದೆ.